ಚಿತ್ರದುರ್ಗ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಆಧುನಿಕ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರ ಡಾನ್‌ಬೋಸ್ಕೊ ಸಂಸ್ಥೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದೇ ಡಿ.24 ರಂದು ಬೆಳಿಗ್ಗೆ 10.30ಕ್ಕೆ ನಗರದ ಚಿತ್ರ ಡಾನ್‌ಬೋಸ್ಕೊ ಪದವಿ ಕಾಲೇಜು ಸಭಾಂಗಣದಲ್ಲಿ “ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಹಾಗೂ ವಿವಿಧ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಟ್ಟಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಚಿತ್ರ ಡಾನ್‌ಬಾಸ್ಕೊ ಸಂಸ್ಥೆಯ ನಿರ್ದೇಶಕಿ ಅಂತೋನಿ ರಾಜ್ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಭಾಗವಹಿಸುವವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ.