ಚಂಡೀಗಢ : ಹರ್ಯಾಣದ ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಮಲಗಿದ್ದ ಇಟ್ಟಿಗೆ ಗೂಡು ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಮೃತರನ್ನು ನಿಶಾ (3 ತಿಂಗಳು), ಸೂರಜ್ (9), ನಂದಿನಿ (5) ಮತ್ತು ವಿವೇಕ್ (9) ಎಂದು ಗುರುತಿಸಲಾಗಿದೆ. ನಾರ್ನಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದೆ. ಮಕ್ಕಳು ಮತ್ತು ಹಲವಾರು ಕಾರ್ಮಿಕರು ಇಟ್ಟಿಗೆ ಗೂಡು ಗೋಡೆಯ ಬಳಿ ಮಲಗಿದ್ದಾಗ ಅವರ ಮೇಲೆ ಗೋಡೆ ಕುಸಿದಿದೆ.
ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಮೃತಪಟ್ಟರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಗೌರಿ (5 ವರ್ಷ) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ.
ಆಕೆ ಹಿಸಾರ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಐವರು ಮಕ್ಕಳು ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಬಧವ್ ಗ್ರಾಮದವರು. ಪೊಲೀಸರ ಪ್ರಕಾರ, ಉತ್ತರ ಪ್ರದೇಶದ ಅನೇಕ ಕಾರ್ಮಿಕರು ಬುಡಾನ್‌ನ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಾರೆ.
ಘಟನೆ ಬಳಿಕ ಎಸ್.ಪಿ. ಮಿನಾ ಗಿಸ್ಸಾರ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದರು. ಅವರ ಮಾಹಿತಿ ಪ್ರಕಾರ ಸಂತ್ರಸ್ತರ ಕುಟುಂಬಗಳು ಈ ಬಗ್ಗೆ ಲಿಖಿತ ದೂರು ನೀಡಿಲ್ಲ. ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದರು.