ದಕ್ಷಿಣದ ಸುಂದರಿ ಸಾಯಿ ಪಲ್ಲವಿ ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡು ವಾರಣಾಸಿಗೆ ಭೇಟಿ ನೀಡಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತೆಲುಗು ಮತ್ತು ಬಾಲಿವುಡ್ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಇಂದು (ಡಿಸೆಂಬರ್ 23) ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ದೇವರ ಸನ್ನಿಧಿಯಲ್ಲಿ ಸ್ವಲ್ಪ ಸಮಯ ಕಳೆದರು. ನಟಿ ವಾರಣಾಸಿಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಂದಹಾಗೆ, ನಾಗ ಚೈತನ್ಯ ಮುಖ್ಯ ಭೂಮಿಕೆಯಲ್ಲಿರುವ ತಾಂಡೇಲ್ ಚಿತ್ರ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದೆ.
ಇದು ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ರಾಮಾಯಣದಲ್ಲಿ ರಣಬೀರ್ ಕಪೂರ್ ಎದುರು ಸೀತೆಯಾಗಿ ಸಾಯಿ ಪಲ್ಲಿವಿ ನಟಿಸಿದ್ದಾರೆ. ಚಿತ್ರದಲ್ಲಿ ಯಶ್ ರಾವಣನ ಪಾತ್ರ ಮಾಡಲಿದ್ದಾರೆ.