ಬೆಳಗಾವಿಯಲ್ಲಿ ‘ಅಸ್ಮಿತೆ’ ವ್ಯಾಪಾರಮೇಳ-2024 ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಇಂದು (ಡಿ 26) ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.
ಶ್ರಮಿಕ ವರ್ಗದ ಮಹಿಳಾ ಶಕ್ತಿಯನ್ನು ಆರ್ಥಿಕವಾಗಿ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಹಲವಾರು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ನಡೆಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಳಗಾವಿ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಬೆಳಗಾವಿ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಈ ಮೇಳವನ್ನು ಡಿಸೆಂಬರ್ 26 ರಿಂದ ಜನವರಿ 4 ರವರೆಗೆ ನಡೆಸಲಾಗುತ್ತದೆ.
ನಗರ ಮತ್ತು ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದರಿಂದ ಹೆಚ್ಚು ಸಾರ್ವಜನಿಕರು ಈ ಮೇಳದ ಸದುಪಯೋಗವನ್ನು ಪಡೆಯಲು ಸ್ವ-ಸಹಾಯ ಗುಂಪಿನ ಮಹಿಳೆಯರ ಪದವಿ ಎಂಬ ಖರೀದಿ, ಹೆಚ್ಚಿನ ನಿರ್ವಹಣೆಯೊಂದಿಗೆ ಅವರ ಆರ್ಥಿಕ ಸಬಲತೆಗೆ ಕೈ ಜೋಡಿಸಲಿದ್ದಾರೆ. ಮಹಿಳೆಯರ ಉತ್ಪನ್ನಗಳ ಮಾರಾಟಕ್ಕೆ ಹಳ್ಳಿ ಸಂತೆ, ತಾಲೂಕು ಮಟ್ಟದ ಮಾಸಿಕ ಸಂತೆ, ಜಿಲ್ಲಾ ವಸ್ತು ಮಾರಾಟ ಮೇಳ ಹಾಗೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತಿದೆ.