ಚಿತ್ರದುರ್ಗ : – ಡಿ 24
ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇದೇ ಡಿ.29ರಂದು ಚಿತ್ರದುರ್ಗ ನಗರದ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ.
ಅಭ್ಯರ್ಥಿಗಳು ಕೆಪಿಎಸ್‍ಸಿಯಿಂದ ಡೌನ್‍ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್‍ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್‍ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ತರುವಂತಿಲ್ಲ. ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.