ರಾಯಚೂರು: ಕುರಿಗಳ ಜೀವ ಉಳಿಸಲು ಹಳ್ಳಕ್ಕೆ ಸರ್ಕಾರಿ ಬಸ್ ನುಗ್ಗಿದ ಘಟನೆ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಕ್ರಾಸ್ ಬಳಿ ನಡೆದಿದೆ.
ಹಾವೇರಿಯಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್ ಏಕಾಏಕಿ ಕುರಿ ಹಿಂಡಿನ ಮೇಲೆ ಹಾದು ಹೋಗಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಕೂಡಲೇ ಚಾಲಕ ಬಸ್ಸನ್ನು ನಾಲೆಗೆ ಇಳಿಸಿದ್ದಾನೆ. ಒಂದು ದೊಡ್ಡ ಅನಾಹುತವನ್ನು ತಪ್ಪಿಸಲಾಯಿತು; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕ ತಕ್ಷಣ ಎಚ್ಚೆತ್ತುಕೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಸುಮಾರು 5 ಕಿ.ಮೀ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.