ಮುಂಬೈ: ಮೂರನೇ ಬಾರಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪತಿಯೊಬ್ಬ ತನ್ನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮೈನಾ ಎಂದು ಗುರುತಿಸಲಾಗಿದೆ. ಕೊಲೆಯಾದ ಆರೋಪಿಯನ್ನು ಕುಂಡ್ಲಿಕ್ ಉತ್ತಮ್ ಕಾಳೆ (32) ಎಂದು ಗುರುತಿಸಲಾಗಿದೆ. ಮೂವರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಕಾರಣ ಆರೋಪಿ ಆಕೆಯನ್ನು ಹಿಂಸಿಸಿದ್ದಾನೆ.
ಈ ವಿಚಾರವಾಗಿ ಅವರ ನಡುವೆ ವಾಗ್ವಾದ ನಡೆದಿತ್ತು ಎಂದು ಮೈನಾ ಸಹೋದರಿ ಹೇಳಿದ್ದಾರೆ. ಗುರುವಾರ ಸಂಜೆ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಈ ವೇಳೆ ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ. ಜನರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಆಕೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ಪೊಲೀಸರು ಕಾಳೆ ಹತ್ಯೆಯ ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸುತ್ತಾರೆ.