Breaking
Wed. Jan 1st, 2025

ವಿಶ್ವಮಾನವ ದಿನಾಚರಣೆ: ಸರಳ ಆಚರಣೆ

ಚಿತ್ರದುರ್ಗ

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಾಂಸ್ಕೃತಿಕವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಶೋಕಾಚರಣೆ ಹಿನ್ನಲೆಯಲ್ಲಿ ಸರಳವಾಗಿ ಆಯೋಜಿಸಲಾಗಿತ್ತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ಬಿ.ಎಂ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಶಾಲಾ ಶಿಕ್ಷಣ ಇಲಾಖೆ ಕನ್ನಡ ವಿಷಯ ಪರಿವೀಕ್ಷಕ ಕೆ.ಶಿವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *