ಚಿತ್ರದುರ್ಗ : ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ ಜ.05ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಚಳ್ಳಕೆರೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವಿವಿಧ ಕಾರಣಗಳಿಂದ ಖಾಲಿ ಇರುವ 16 ಅಂಗವಾಡಿ ಕಾರ್ಯಕರ್ತೆಯರು ಹಾಗೂ 30 ಸಹಾಯಕಿಯರ ಸೇವೆಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು 4 ಹಂತದ ಗೌರವ ಪೂರ್ಣಗೊಳ್ಳುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 288 ಮತ್ತು ಸಹಾಯಕಿಯರ ಹುದ್ದೆಗಳಿಗೆ 118 ಅಪೂರ್ಣ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಅರ್ಜಿ ಸಲ್ಲಿಸುವ ನಾಲ್ಕು ಹಂತಗಳನ್ನು ಪೂರ್ಣಗೊಳಿಸಲು ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 2025ರ ಜ.5ರ ಸಂಜೆ 5.30ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಚಳ್ಳಕೆರೆ ಶಿಶು ಅಭಿವೃದ್ಧಿಯೋಜನಾಧಿಕಾರಿ ಹರಿಪ್ರಸಾದ್ ಮೊದಲು ಅರ್ಜಿ ಸಲ್ಲಿಸಿದ್ದಾರೆ.