ಚಿತ್ರದುರ್ಗ : ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN ನಲ್ಲಿ ಜೆ.ಓ.ಸಿ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕಗಳನ್ನು ಪಡೆದು ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024ನೇ ಸಾಲಿನಲ್ಲಿ ಪ್ರವೇಶಾತಿ ಪಡೆದವರು ಪ್ರಧಾನಮಂತ್ರಿ ಶಿಷ್ಯವೇತನ ಯೋಜನೆ ಎಂಬ ಶಿರ್ಷಿಕೆಯಡಿಯಲ್ಲಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ.3ರವರೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು ಸದುಪಯೋಗಪಡೆದುಕೊಳ್ಳಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿದೇರ್ಶಕರ ದೂವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.