Breaking
Sat. Jan 4th, 2025

ಕ್ಷಯ ರೋಗ ನಿಯಂತ್ರಣ ಸಾರ್ವಜನಿಕ ಕಾಳಜಿ ಆಗಬೇಕು ಟಿಹೆಚ್‍ಒ ಡಾ.ಬಿ.ವಿ.ಗಿರೀಶ್….!

ಚಿತ್ರದುರ್ಗ : ಕ್ಷಯ ರೋಗ ನಿಯಂತ್ರಣ ಸಾರ್ವಜನಿಕ ಕಾಳಜಿ ವಹಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಷಯ ಮುಕ್ತ 100 ದಿನಗಳ ಕಾರ್ಯಕ್ರಮ ಅವರ ಕಾರ್ಯಕ್ರಮ.

ಕ್ಷಯ ರೋಗವು ಭಾರತದ ಸಾರ್ವಜನಿಕ ಆರೋಗ್ಯಕ್ಕೆ ಅತಿ ದೊಡ್ಡ ತೊಂದರೆಗಳಲ್ಲಿ ಒಂದಾಗುವುದಿಲ್ಲ. ಪ್ರತಿ ವರ್ಷ ವಿಶ್ವದಲ್ಲೇ ಅತಿ ಹೆಚ್ಚು ಜನ ಕ್ಷಯರೋಗಕ್ಕೆ ತುತ್ತಾಗುತ್ತಾರೆ. ಭಾರತವನ್ನು ಕ್ಷಯ ಮುಕ್ತಗೊಳಿಸಲು ಸಮುದಾಯವು ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಕ್ಷಯ ರೋಗವು ಮೈಕೋ ಕ್ಯುಲೇಶನ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಕ್ಷಯರೋಗಿಯು ಕೆಮ್ಮಿದಾಗ ಅಥವಾ ಸೀಮಿದಾಗ ಹೊರಬರುವ ತುಂತುರು ರೋಗಾಣುಗಳು ಗಾಳಿಯ ಮೂಲಕ ಆರೋಗ್ಯವಂತ ವ್ಯಕ್ತಿಯ ಶ್ವಾಸಕೋಶಕ್ಕೆ ಸೋಂಕು ಉಂಟುಮಾಡುತ್ತದೆ.

 ಕ್ಷಯ ಮಾಡುವಾಗ ಕೆಮ್ಮುವಾಗ ಹಾಗೂ ಸೀನ ಬಾಯಿ ಮತ್ತು ಮೂಗಿನ ಹತ್ತಿರ ಕರವಸ್ತ್ರ ಇಟ್ಟುಕೊಳ್ಳಬೇಕು. ರೋಗಿಯ ಕಫವನ್ನು ಮನಸ್ಸಿಗೆ ಬಂದ ಕಡೆ ಉಗಿಯಬಾರದು. ಕಫವನ್ನು ಡಬ್ಬಿಯಲ್ಲಿ ಶೇಖರಿಸಿ ಗುಂಡಿ ತೋಡಿ ಮುಚ್ಚಬೇಕು. ನವಜಾತ ಶಿಶುಗಳಿಗೆ ಬಿಸಿಜಿ ಲಸಿಕೆ ಹಾಕಬೇಕು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಮಾತನಾಡಿ, ನಿಮ್ಮ ಮನೆಯಲ್ಲಿ ಹಾಗೂ ಸುತ್ತಮುತ್ತಲಿನವರಲ್ಲಿ ಟಿಬಿ ರೋಗದ ಲಕ್ಷಣಗಳು ಇರುವವರನ್ನು ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಬೇಕು. ಟಿಬಿ ರೋಗವನ್ನು ಬೇಗ ಪತ್ತೆ ಹಚ್ಚಿ ಪೌಷ್ಟಿಕ ಆಹಾರ ಸೇವಿಸಿ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಕ್ಷಯ ರೋಗದ ಅಪಾಯ ಇರುವವರನ್ನು ವೈದ್ಯರು ಮಾಡಿ ಎಂದು ಹೇಳಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಬಗ್ಗೆ.

 ಕಾರ್ಯಕ್ರಮದಲ್ಲಿ ಚಿಕ್ಕಗೊಂಡನಹಳ್ಳಿ ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಚಿನ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಂಕರ್ ನಾಯಕ್, ಪ್ರವೀಣ್ ಕುಮಾರ್, ಸಮುದಾಯ ಆರೋಗ್ಯ ಅಧಿಕಾರಿ ಲೋಹಿತ್ ಕುಮಾರ್, ಪ್ರಯೋಗಶಾಲಾ ತಂತ್ರಜ್ಞ ನಾಗರಾಜ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಸುಧಾ, ಪ್ರಿಯಾಂಕಾ, ಕೆ.ಟಿ.ದೇವೇಂದ್ರ, ಗ್ರಾಮಸ್ಥರು ಉಪಸ್ಥಿತರಿದ್ದ ರು.

Related Post

Leave a Reply

Your email address will not be published. Required fields are marked *