ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಇದೇ ಜ.03ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಬಾಲಭವನ ಆವರಣದಲ್ಲಿ “ಹಿರಿಯ ನಾಗರಿಕರಿಗೆ “ಉಚಿತ ನೇತ್ರ ತಪಾಸಣಾ ಶಿಬಿರ” ಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯಾಧಿಕಾರಿ ರೇಣುಪ್ರಸಾದ್, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾ.ಪಂ ಇಒ ವೈ.ರವಿಕುಮಾರ್ ಭಾಗವಹಿಸುವರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.