ಚಿತ್ರದುರ್ಗ : ಹಿರಿಯೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 07ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ “ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶುಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಕುರಿ ಮತ್ತು ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ ರೈತ ಭಾಂದವರು ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ 8277931058ಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆಯಬಹುದು.
ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರನ್ನು ತರಬೇತಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ್ ತಿಳಿಸಿದ್ದಾರೆ
.