ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜಿನ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ, ಎನ್.ಎಸ್.ಎಸ್., ಯುವ ರೆಡ್‌ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಉದ್ಘಾಟನೆ ಸಮಾರಂಭ ಜ.7 ರಂದು ಬೆಳಿಗ್ಗೆ 10:30ಕ್ಕೆ ಕಾಲೇಜು ಆವರಣದಲ್ಲಿ ಜರುಗಲಿದೆ.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಸಿ.ವಿರೇಂದ್ರಪಪ್ಪಿ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜು ಸಹ ಪ್ರಾಧ್ಯಾಪಕ ಡಾ.ಎಸ್.ಎಮ್.ಮುತ್ತಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಐ.ಕ್ಯೂ.ಎ.ಸಿ ಸಂಚಾಲಕಿ ಡಾ.ಆರ್.ತಾರಿಣಿ ಶುಭದಾಯಿನಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಮತ್ತು ಎನ್.ಸಿ.ಸಿ. ಅಧಿಕಾರಿ ಪ್ರೊ.ಕೆ.ಮಂಜುನಾಥ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಡಿ.ಆರ್.ಪ್ರಸನ್ನಕುಮಾರ್, ಎನ್.ಎಸ್.ಎಸ್. ಘಟಕ-1 ಅಧಿಕಾರಿ ಡಾ.ವಿ.ಪ್ರಸಾದ್, ಎನ್.ಎಸ್.ಎಸ್. ಘಟಕ-2 ಅಧಿಕಾರಿ ಪ್ರೊ.ಬಿ.ಕೆ.ಬಸವರಾಜು, ಯುವ ರೆಡ್‌ಕ್ರಾಸ್ ಸಂಚಾಲಕ ಡಾ.ಹೆಚ್.ಬಸವರಾಜು, ರೋವರ್ಸ್ ಲೀಡರ್ ಡಾ.ಆರ್.ಗಂಗಾಧರ, ರೇಂಜರ್ಸ್ ಲೀಡರ್ ಡಾ.ಕೆ.ಲೀಲಾವತಿ, ಪತ್ರಾಂಕಿತ ವ್ಯವಸ್ಥಾಪಕ ಡಬ್ಲೂö್ಯ.ಮಾರ್ಟಿನ್ ಸ್ಯಾಮುಯಲ್ ಉಪಸ್ಥಿತರಿರುವರು.