ಚಿತ್ರದುರ್ಗ : ಜ.14 ರಂದು ಶ್ರೀ.ಶಿವಯೋಗಿ ಸಿದ್ದರಾಮೇಶ್ವರ, ಜ.19 ಮಹಾಯೋಗಿ ವೇಮನ, ಜ.21 ರಂದು ಅಂಬಿಗರ ಚೌಡಯ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ಜ.7 ರಂದು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪೂರ್ವಭಾವಿ ಸಭೆಗಳನ್ನು ಆಯೋಜಿಸಲಾಗಿದೆ.
ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆ ಮಧ್ಯಾಹ್ನ 12 ಗಂಟೆಗೆ, ವೇಮನ ಜಯಂತಿ ಪೂರ್ವಭಾವಿ ಸಭೆ ಮಧ್ಯಾಹ್ನ 12:30ಕ್ಕೆ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ ಮಧ್ಯಾಹ್ನ1 ಗಂಟೆಗೆ ಜರುಗಲಿದ್ದು, ಸಮುದಾಯದ ಮುಖಂಡರು, ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಾಗಿ ಸಲಹೆ ಸೂಚನೆ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.