Breaking
Tue. Jan 7th, 2025

ಯುವನಿಧಿಗೆ ನೋಂದಾಯಿಸಿಕೊಳ್ಳಲು ವಿಶೇಷ ಅಭಿಯಾನ….!

ಶಿವಮೊಗ್ಗ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಯುವನಿಧಿ’ ಯೋಜನೆಯಲ್ಲಿ 2022-23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು 

ದಿ: 06-01-2025 ರಿಂದ 20-01-2025 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

 ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ರೂ.1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. 

 ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊAಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆAದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುವುದು.

 ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಯುವನಿಧಿ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಅರ್ಹರು ತಾವು ವಿದ್ಯಾಭ್ಯಾಸ ಮಾಡಿದಂತಹ ಅಥವಾ ಹತ್ತಿರದ ಕಾಲೇಜು/ಪಾಲಿಟೆಕ್ನಿಕ್‌ಗೆ ಭೇಟಿ ನೀಡಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ಡ್ ಮೊಬೈಲ್ ನಂಬರ್ ಹೊಂದಿರತಕ್ಕದ್ದು.

 ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪ್ರಥಮ ದರ್ಜೆ ಕಾಲೇಜು/ಪಾಲಿಟೆಕ್ನಿಕ್ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ದೂ.ಸಂ: 08182-255293 ನ್ನು ಸಂಪರ್ಕಿಸಬಹುದೆAದು ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *