ಬಳ್ಳಾರಿ. :ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಕಲ್ಪಿಸಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಜ.09 ರಂದು ಮಧ್ಯಾಹ್ನ 2 ಗಂಟೆಯಿಂದ 3.30 ಗಂಟೆಗಳವರೆಗೆ ಸಾರ್ವಜನಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಹವಾಲು ಸ್ವೀಕರಿಸುವರು.
ಜಿಲ್ಲೆಯಲ್ಲಿ ಆಯೋಗದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಜಿಲ್ಲೆಯಲ್ಲಿ ಇತ್ಯಪಡಿಸಿ, ವಿಲೇ ಮಾಡಲು ಉದ್ದೇಶಿಸಲಾಗಿದೆ. ದಾಖಲಾಗಿರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಪ್ರತಿವಾದಿಗಳು ಜ.09 ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಹಾಜರಾಗಬೇಕು.
ಸಾರ್ವಜನಿಕರು ಅಂದು ಅಧ್ಯಕ್ಷರನ್ನು ಭೇಟಿಯಾಗಿ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಕುರಿತು ದೂರು ಅಥವಾ ಮನವಿಗಳನ್ನು ಸಲ್ಲಿಸಬಹುದು ಎಂದು ಸಾರ್ವಜನಿಕ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸಬಹುದು.