Breaking
Tue. Jan 7th, 2025

ಯಶಸ್ವಿನಿ ಯೋಜನೆಯಡಿಯಲ್ಲಿ ಸಹಕಾರಿಗಳಿಗೆ ಚಿಕಿತ್ಸೆ ಸೌಲಭ್ಯ….!

ಶಿವಮೊಗ್ಗ : ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ. 

 ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭ, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರಿಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4ಕ್ಕಿಂತ ಹೆಚ್ಚಿನ ಸದಸ್ಯರಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4ಕ್ಕಿಂತ ಹೆಚ್ಚಿನ ಸದಸ್ಯರಿಗೆ ತಲಾ ರೂ.200 ಮೊತ್ತವನ್ನು ನೀಡಬೇಕು. .

 ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಮೂಗು ರೋಗಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಗಂಟಲು ನೋವು, ಕಣ್ಣಿನ, ಮೂಳೆ ರೋಗಗಳು, ಸ್ತಿçÃಯರಿಗೆ ಸಂಬಾಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿದೆ.

 ಈ ಯೋಜನೆಯಡಿಯಲ್ಲಿ ಒಂದು ಗರ್ಭಿಣಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್‌ಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ನಿಗದಿಪಡಿಸಲಾಗಿದೆ, ಆಸ್ಪತ್ರೆಯ ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಚಿಕಿತ್ಸೆ ಮತ್ತು ಯೋಜನೆಗೆ ಅರ್ಜಿ ಸಲ್ಲಿಸಲು ಆಸ್ಪತ್ರೆಗಳಿಗೆ ಖಚಿತ ಪಡಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಹರೀಶ್, ಯಶಸ್ವಿನಿ ಯೋಜನೆ ಕೋ-ಆರ್ಡಿನೇಟರ್ ಮೊ;9739588777 ಗೆ ಸಂಪರ್ಕಿಸಬಹುದಾಗಿದ್ದರೆ, ಈ ಯೋಜನೆ ಸದುಪಯೋಗ ಪಡೆದುಕೊಳ್ಳಲು ಸಹಕಾರ ಸಂಘಗಳ ಉಪನಿಬಂಧಕರಾದ ನಾಗಭೂಷಣ್ ಚಂದ್ರಶೇಖರ್ ಕಲ್ಮನೆ.

Related Post

Leave a Reply

Your email address will not be published. Required fields are marked *