Breaking
Wed. Jan 8th, 2025

ತಜ್ಞ ವೈದ್ಯರ ಹುದ್ದೆ ಭರ್ತಿಗೆ ನೇರ ಸಂದರ್ಶನ…..!

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಕೇಂದ್ರಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

 ಫಿಜಿಶಿಯನ್-02, ಶಸ್ತಚಿಕಿತ್ಸ ತಜ್ಞರು-01, ಸ್ತಿçÃರೋಗ ತಜ್ಞ-03, ಅರಿವಳಿಕೆ-09, ಐಎನ್‌ಟಿ-02, ನೇತ್ರ ತಜ್ಞರು-02, ಮಕ್ಕಳ ತಜ್ಞರು-2, ಕೀಲು ಮತ್ತು ವಿಜ್ಞಾನಿಗಳು-01, ರೇಡಿಯಾಲಜಿಸ್ಟ್ -01, ನೆಫ್ರೊಲಾಜಿಸ್ಟ್-01 ಒಟ್ಟು 24 ತಜ್ಞ ವೈದ್ಯರು ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುವುದು.

 ಆಸಕ್ತ ಅಭ್ಯರ್ಥಿಗಳು ದಿ: 15-01-2025 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182 222382 ಅನ್ನು ಸಂಪರ್ಕಿಸಬಹುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು.

 

 

 

Related Post

Leave a Reply

Your email address will not be published. Required fields are marked *