Breaking
Wed. Jan 8th, 2025

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ  ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ….!

ಚಿತ್ರದುರ್ಗ :  ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಜ. 14 ರಂದು ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಹಾಗೂ ಜ. 19 ರಂದು ಮಹಾಯೋಗಿ ವೇಮನ ರವರ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಹಾಗೂ ಮಹಾಯೊಗಿ ವೇಮನ ರವರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ :  ಸಿದ್ಧರಾಮೇಶ್ವರರ ಜಯಂತಿಯನ್ನು ಜ. 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಸಲಹೆ ನೀಡಿದರು. ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಶಿಷ್ಠಾಚಾರ ಪಾಲಿಸಿಕೊಂಡು, ಅರ್ಥಪೂರ್ಣವಾಗಿ ಆಚರಿಸಲಾಗುವುದು. ಶಿವಯೋಗಿ ಸಿದ್ಧರಾಮೇಶ್ವರರ ಕುರಿತಾದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗುವುದು, ಅಲ್ಲದೆ ಇವರ ಕುರಿತಾದ ವಿಶೇಷ ಉಪನ್ಯಾಸಕ್ಕಾಗಿ ಸಂಪನ್ಮೂಲ ವ್ಯಕ್ತಿಯನ್ನು ಗುರುತಿಸಿ, ಆಹ್ವಾನಿಸಲಾಗುವುದು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ವಿತರಣೆಗೆ ಕ್ರಮ ವಹಿಸಲಾಗುವುದು. ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾಲಂಕಾರ ವ್ಯವಸ್ಥೆ ಕೈಗೊಂಡು, ವಿಶೇಷವಾಗಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದರು.

      ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಬೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಹೆಚ್. ಲಕ್ಷ್ಮಣ, ಖಜಾಂಚಿ ಇ. ಮಂಜುನಾಥ್, ಬೋವಿ ಗುರುಪೀಠದ ಸಿಇಒ ಗೋವಿಂದಪ್ಪ ಸೇರಿದಂತೆ ಸಮಾಜದ ಹಲವು ಮುಖಂಡರು ಪಾಲ್ಗೊಂಡಿದ್ದರು.

ಮಹಾಯೋಗಿ ವೇಮನ ಜಯಂತಿ : ಸಮಾಜದ ಮುಖಂಡರ ಸಲಹೆಯಂತೆ ವೇಮನರ ಜಯಂತಿಯನ್ನು ಜ. 19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದ ಪತ್ರಿಕಾ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಮಹಾಯೋಗಿ ವೇಮನರ ಕುರಿತಾದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗುವುದು, ಅಲ್ಲದೆ ವೇಮನರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ವಿತರಣೆಗೆ ಕ್ರಮ ವಹಿಸಲಾಗುವುದು. ಮಹಾಯೋಗಿ ವೇಮನರ ಭಾವಚಿತ್ರಕ್ಕೆ ಪುಷ್ಪಾಲಂಕಾರ ವ್ಯವಸ್ಥೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಎಲ್ಲ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

      ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ರೆಡ್ಡಿ ಸಮಾಜದ ಮುಖಂಡರುಗಳಾದ ಇಂಟೂರು ಜಯರಾಮರೆಡ್ಡಿ, ಜಿ.ಹೆಚ್. ವಿಜಯಕುಮಾರ್, ಕಟ್ಟಾ ತಿಪ್ಪಾರೆಡ್ಡಿ, ಕೆ.ಆರ್. ಬಾಬುರೆಡ್ಡಿ, ಹನುಮಂತರೆಡ್ಡಿ, ಡಿ.ಪಿ. ತಿಪ್ಪೇಸ್ವಾಮಿ, ಶಿವಣ್ಣ ರೆಡ್ಡಿ, ವೆಂಕಟಶಿವರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *