ಚಿತ್ರದುರ್ಗ ಜ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇದೇ ಜ.09ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಸಮಾಜ ವಿಜ್ಞಾನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಮತ್ತು ವಸತಿ ಪ್ರೌಢಶಾಲೆಗಳಲ್ಲಿ ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ಸಮಾಜ ವಿಜ್ಞಾನ ಬೋಧನೆಯಲ್ಲಿ ಎಸ್‍ಎಸ್‍ಎಲ್‍ಸಿ ಮಕ್ಕಳನ್ನು ಪರೀಕ್ಷೆಗೆ ಸಿದ್ಧಗೊಳಿಸುವುದು ಹೇಗೆ? ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ, ಉತ್ಸಾಹ ಅತ್ಯುತ್ತಮ ಶಿಕ್ಷಕರಾಗುವುದು ಹೇಗೆ? ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣೆ ಮುಂತಾದ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸಂಪನ್ಮೂಲ ವ್ಯಕ್ತಿ ಚೇತನ್‍ರಾಮ್ ಮೈಸೂರು ಅವರಿಂದ ವ್ಯಕ್ತಿ ವಿಕಸನ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು