Breaking
Wed. Jan 8th, 2025

ಯುವನಿಧಿ” ವಿಶೇಷ ನೋಂದಣಿ ಅಭಿಯಾನ…..!

ಚಿತ್ರದುರ್ಗ : ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ಮತ್ತು 2024ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಇದೇ ಜ.20 ರವರೆಗೆ “ಯುವನಿಧಿ” ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣ ಪತ್ರ ಸೇರಿದಂತೆ ನೋಂದಣಿಗೆ ಅಗತ್ಯವಿರುವ ದಾಖಲಾತಿಗಳೊಂದಿಗೆ http://sevasindhugs.karnataka.gov.in ನಲ್ಲಿ ಆನ್‍ಲೈನ್‍ನಲ್ಲಿ ನೋಂದಾಯಿಸುವುದು. ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ, ಕಾಲೇಜು, ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸಹಾಯವಾಣಿ ಸಂಖ್ಯೆ 18005997154, ದೂರವಾಣಿ ಸಂಖ್ಯೆ 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *