Breaking
Fri. Jan 10th, 2025

ನಗರದ ಒನಕೆ ಓಬವ್ವ ವೃತ್ತದಿಂದ ತರಾಸು ರಂಗಮಂದಿರದವರೆಗೂ ಶಾಲಾ ಮಕ್ಕಳ ಜಾಗೃತಿ ಜಾಥಾ….!

ಚಿತ್ರದುರ್ಗ : ಇದೇ ಜ.25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತದೆ. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಒನಕೆ ಓಬವ್ವ ವೃತ್ತದಿಂದ ತರಾಸು ರಂಗಮಂದಿರದವರೆಗೂ ಶಾಲಾ ಮಕ್ಕಳ ಜಾಗೃತಿ ಜಾಥಾ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಿಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

“ಮತದಾನಕ್ಕಿಂತ ಇನ್ನಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ” ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದ್ದು, ನಗರದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ, ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಪ್ರತಿಜ್ಞಾವಿಧಿ ಸ್ವೀಕರಿಸಬೇಕು.

ಈ ಸಂದರ್ಭದಲ್ಲಿ ಜಿಪಂ.ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು.

Related Post

Leave a Reply

Your email address will not be published. Required fields are marked *