Breaking
Fri. Jan 10th, 2025

ಚಿತ್ರದುರ್ಗ ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭೇಟಿ….!

ಚಿತ್ರದುರ್ಗ : ಇದೇ ಜ.22ರಿಂದ 24ರವರೆಗೆ ಚಿತ್ರದುರ್ಗ ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಭೇಟಿ ನೀಡಲಿದ್ದಾರೆ. ಜಿಲ್ಲೆಗೆ ಲೋಕಾಯುಕ್ತದಲ್ಲಿ ದಾಖಲಾದ 73 ಪ್ರಕರಣಗಳ ಕುರಿತು ಜ.23 ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಪಲೋಕಾಯುಕ್ತರು ವಿಚಾರಣೆ ನಡೆಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ದಾಖಲೆ ಹಾಗೂ ಮಾಹಿತಿಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಜ.23 ರಂದು ಬೆಳಿಗ್ಗೆ 11 1.30 ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಚಿತ್ರದುರ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಹಾಗೂ ವಿಚಾರಣೆಗೆ ಬಾಕಿ ಇರುವ 73 ಪ್ರಕರಣಗಳಿಗೆ ದೂರುದಾರರು ಹಾಗೂ ಮತ್ತು ಎದುರುದಾರರ ಸಮ್ಮುಖದಲ್ಲಿ ಉಪಲೋಕಾಯುಕ್ತರು ನಡೆಸುತ್ತಾರೆ. ಸಂಬಂದಪಟ್ಟ ಇಲಾಖೆಯ ಮುಖ್ಯಸ್ಥರು ದೂರುದಾರರಿಗೆ ಈ ಕುರಿತು ಮಾಹಿತಿ ನೀಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಬೇಕು. ದೂರುಗಳು ವೈಯಕ್ತಿಕ ಹೆಸರಿನೊಂದಿಗೆ ದಾಖಲಾಗಿವೆ. ಆದರೆ ಅಂತಹ ಅಧಿಕಾರಿಗಳು ಸದ್ಯ ಬೇರೆಡೆ ವರ್ಗಾವಣೆಯಾಗಿದ್ದಾರೆ, ಅವರ ಸ್ಥಾನದಲ್ಲಿರುವ ಅಧಿಕಾರಿಗಳು ಪ್ರಕರಣದ ಹಾಗೂ ಸ್ಥಿತಿಗತಿ ವಿಚಾರಣೆ ವೇಳೆ ಉಪಲೋಕಾಯುಕ್ತರಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಜ.22 ರಂದು ಸಾರ್ವಜನಿಕ ಅಹವಾಲು ಸ್ವೀಕಾರ: ಜ.22 ರಂದು ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಉಪಲೋಕಾಯುಕ್ತರು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮಾಡಿದರು. ಸರ್ಕಾರಿ ಅಧಿಕಾರಿ ಅಥವಾ ನೌಕರರ ಕಾನೂನು ರಿತ್ಯ ಆಗಬೇಕಾದ ಕೆಲಸದಲ್ಲಿ ವಿಳಂಬವಾದರೂ, ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೆ ಒಳಗಾದ ಸಾರ್ವಜನಿಕರು ನಿಗದಿತ ಅರ್ಜಿ ನಮೂನೆ-1 ಮತ್ತು ನಮೂನೆ-2 ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ದೂರು ಸಲ್ಲಿಸಬಹುದು. ಈ ವೇಳೆ ಎಲ್ಲ ಜಿಲ್ಲಾ ಅಧಿಕಾರಿಗಳ ಸ್ಥಳದಲ್ಲಿ ಉಪಸ್ಥಿತರಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ.
ಕೇಂದ್ರ ಸ್ಥಾನದಲ್ಲಿರಲು ತಾಕೀತು: ಉಪಲೋಕಾಯುಕ್ತ ಹಿನ್ನಲೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಅಗತ್ಯ ವೈದ್ಯಕೀಯ ಕಾರಣ ಪಡಿಸಿ, ಅಧಿಕಾರಿಗಳು ಉಪಲೋಕಾಯುಕ್ತ ಭೇಟಿ ವೇಳೆ ಗೈರು ಹಾಜರಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗಿದೆ. ಜ.24 ರಂದು ಲೋಕಾಯುಕ್ತರು ಜಿಲ್ಲೆಯ ಹಾಸ್ಟೆಲ್, ಕಚೇರಿಗಳು, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ಪರಿಶೀಲನೆ ನಡೆಸುತ್ತಾರೆ. ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿಯ ಆವರಣಗಳನ್ನು ಸಹ ಹೊಂದಿರಬೇಕು. ಕಚೇರಿ ಹಾಜರಾತಿ, ಕ್ಯಾಶ್ ರಿಜಿಸ್ಟರ್, ಚಲನವಲನ ವಹಿ ಸೇರಿದಂತೆ ಎಲ್ಲ ಅಗತ್ಯ ಕಡತಗಳನ್ನು ನಿರ್ವಹಿಸಬೇಕು. ಟಪಾಲು ಶಾಖೆಯಲ್ಲಿ ಯಾವುದೇ ವಿಷಯಕ್ಕೆ ಬಹುದಿನಗಳ ಕಾಲ ಕಡತಗಳು ವಿಳಂಬವಾಗದಂತೆ ವಿಲೇ ಮಾಡಲು ಅಧಿಕಾರಿಗಳು ಗಮನ ಹರಿಸಬೇಕು. ಸಾರ್ವಜನಿಕರು ನೀಡಿದ ದೂರು, ಅದಕ್ಕೆ ನೀಡಿರುವ ಪ್ರತ್ಯುತ್ತರ ಕುರಿತು ಮಾಹಿತಿ ಸಿದ್ದವಿರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.
ಸಭೆಯಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು.

Related Post

Leave a Reply

Your email address will not be published. Required fields are marked *