Breaking
Sat. Jan 11th, 2025

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ….!

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ; ಪೌಷ್ಟಿಕಯುಕ್ತ ಆಹಾರ ಒದಗಿಸುವ ವಿನೂತನ ಕಾರ್ಯಕ್ರಮ ಆರಂಭ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

ಬಳ್ಳಾರಿ : ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಒದಗಿಸುವ ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರತಿ ತಿಂಗಳು 09 ಮತ್ತು 24 ನೇ ತಾರೀಖುನಂದು ಗಂಡಾತರ ಗರ್ಭಿಣಿಯರ ಆರೋಗ್ಯ ತಪಾಸಣೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಗ್ರಾಮೀಣ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಗಮಿಸಿದ ಗರ್ಭಿಣಿಯರಿಗೆ ಪ್ರಾಯೋಗಿಕವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಲಹೆ ಸೂಚನೆಯಂತೆ ಪೌಷ್ಟಿಕ ಆಹಾರ ಸೇವಿಸಿದ್ದಾರೆ. ಊಟದ ವ್ಯವಸ್ಥೆ ಮಾಡುವ ಮೂಲಕ ಜಿಲ್ಲೆಯ ಗರ್ಭಿಣಿ ತಾಯಂದಿರು ತಪಾಸಣೆಗೆ ಆಗಮಿಸಿ ಸಂತಸದಿಂದ ಮನೆಗೆ ಹಿಂತಿರುಗುವ ಕಾರ್ಯವನ್ನು ಮಾಡಲಾಗುವುದು, ಸದುಪಯೋಗ ಪಡೆಯಬೇಕು ಎಂದ ಅವರು.

ಸಾಮಾನ್ಯವಾಗಿ 12 ವಾರದೊಳಗೆ ಗರ್ಭಿಣಿ ಎಂದು ತಿಳಿದ ದಿನವೇ ಹತ್ತಿರದ ಆಸ್ಪತ್ರೆಗೆ ತಪಾಸಣೆ ಮಾಡಿಸುವ ಮೂಲಕ ಅವರ ಎಲ್ಲಾ ಮಾಹಿತಿಯನ್ನು ಒದಗಿಸಿ ಇಲಾಖೆ ವೈದ್ಯರ ಸೂಚನೆಯಂತೆ ಪ್ರತಿ ತಿಂಗಳ ತೂಕ, ರಕ್ತದ ಪ್ರಮಾಣ ಮತ್ತು ಇತರ ಅಗತ್ಯ ಪರೀಕ್ಷೆಗಳನ್ನು ಮಾಡುವುದರಿಂದ ಹೆರಿಗೆಯ ಸಮಯದಲ್ಲಿ ಅನಗತ್ಯ ಒತ್ತಡ ಉಂಟಾಗುತ್ತದೆ.

ಪ್ರಸ್ತುತ ತಿಂಗಳ ಪ್ರತಿ ತಿಂಗಳು 09 ನೇ ತಾರೀಖಿನಂದು ಎಲ್ಲಾ ಗರ್ಭಿಣಿ ಸ್ತ್ರೀಯರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ, ಮುಖ್ಯವಾಗಿ ಗಂಡಾತರ ಗರ್ಭಿಣಿಯರು ಎಂದು ಗುರ್ತಿಸಿದ ನಂತರ ಅಂದರೆ ಚೊಚ್ಚುಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶದ ಕೊರತೆ, ಅವಳಿಜವಳಿ ಗರ್ಭಿಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗಿರುವುದು, ಮೊದಲ ವೈದ್ಯರಿಗೆ ವೈದ್ಯರು, ಮುಂತಾದ ಕಾರಣಗಳನ್ನು ಹೊಂದಿರಬಾರದು. . ಜೊತೆಗೆ ತೀವ್ರ ರಕ್ತಹೀನತೆಯಂತಹ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಾದ (ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ) ಸುಧಾರಣೆಯಾಗದಿದ್ದಲ್ಲಿ ಅದನ್ನು ತಪ್ಪದೇ ಕಳುಹಿಸಬೇಕು. ಅಗತ್ಯವಿದ್ದಲ್ಲಿ ಸ್ಕಾöಯನ್ ಮಾಡಿಸುವುದು. ಮೊದಲ ಹೆರಿಗೆ ಶಸ್ತಚಿಕಿತ್ಸೆ ಮೂಲಕ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಠ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು.

ಗಾಳಿ ಸುದ್ದಿ ಮೂಲಕ ಕಬ್ಬಿಣಾಂಶ ಮಾತ್ರ ನುಂಗಿದರೆ, ಭ್ರೂಣದ ದಪ್ಪವಾಗುತ್ತದೆ, ಮಗು ಹುಟ್ಟುತ್ತದೆ ಎಂಬ ತಪ್ಪುಗಳನ್ನು ಸಮುದಾಯದಲ್ಲಿ ನಂಬದೇ ವೈದ್ಯರ ಸಲಹೆಯಂತೆ ನೀಡುವ ಕಬ್ಬಿಣಾಂಶ ಮಾತ್ರೆಗಳು ಪ್ರತಿದಿನ ಕನಿಷ್ಠ 180, ಒಂದು ವೇಳೆ ರಕ್ತಹೀನತೆಯ ಪ್ರಮಾಣವು ದಿನಕ್ಕೆ 2 ರಂತೆ 360 ಮಾತ್ರೆಗಳನ್ನು 6 ತಿಂಗಳವರೆಗೆ ಸೇವಿಸಿ ಮತ್ತು ಇದರ ಜೊತೆಗೆ ದೈಹಿಕವಾಗಿ ಸದೃಡವಾಗಿರುವ ಕ್ಯಾಲ್ಸಿಯಮ್ ಮಾತ್ರೆಗಳನ್ನು ಸಹ ನುಂಗಬೇಕು ಎಂದು ಅವರು ತಿಳಿಸಿದ್ದಾ ರೆ.

Related Post

Leave a Reply

Your email address will not be published. Required fields are marked *