Breaking
Sat. Jan 11th, 2025

ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ……!

ಚಿತ್ರದುರ್ಗ : ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

 

Related Post

Leave a Reply

Your email address will not be published. Required fields are marked *