Breaking
Sat. Jan 11th, 2025

ಜ.14ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಆಚರಣೆ ಸಮಾರಂಭ…!

ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜ.14ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ “ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ” ಆಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

   ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ದಿವ್ಯಸಾನಿಧ್ಯವಹಿಸುವರು. ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಸವಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಭೋವಿ ಸಂಘ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಹೆಚ್.ಲಕ್ಷ್ಮಣ್ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಚುನಾಯಿತ ನಗರಸಭಾ ಸದಸ್ಯರು ಹಾಗೂ ಭೋವಿ ಸಮಾಜದ ಗೌರವಾನ್ವಿತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಡಾ.ಬಿ.ಎಂ.ಗುರುನಾಥ ಉಪನ್ಯಾಸ ನೀಡುವರು. ಮೊಳಕಾಲ್ಮುರು ತಾಲ್ಲೂಕು ಚಿಕ್ಕೋಬನಹಳ್ಳಿ ಮುರಾರ್ಜಿ ಮತ್ತು ತಂಡದವರು ಗೀತಗಾಯನ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.

 

Related Post

Leave a Reply

Your email address will not be published. Required fields are marked *