ಚಿತ್ರದುರ್ಗ : ಹೆಚ್.ಎ.ಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ ಫಿಟ್ಟರ್, ಮೆಷಿನಿಸ್ಟ್, ಟರ್ನರ್, ಕಂಪ್ಯೂಟರ್ ಅಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟಟ್, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮಾರ್ಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಅಪರೇಟರ್ ಮೆಕಾನಿಕ್ ರಿಪ್ರೀರಿಗೇಷನ್ ಅಂಡ್ ಕಂಡಿಷಿನಿಂಗ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಈ ಅಪ್ರೆಂಟಿಸ್ ತರಬೇತಿಯು ಎಲ್ಲಾ ಟ್ರೇಡ್‍ಗಳಿಗೂ ಒಂದು ವರ್ಷದ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್), ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರ., ಎನ್‍ಸಿವಿಟಿ ನೋಂದಣಿ ಪ್ರತಿ ಅರ್ಜಿಯೊಂದಿಗೆ ಸಲ್ಲಿಸಬೇಕು.
ಆನ್‍ಲೈನ್‍ನಲ್ಲಿ ನೊಂದಾಯಿಸಲು https://apprenticeshindia.gov.in, www.hal-india.com/career ವೆಬ್‍ಸೈಟ್ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.