Breaking
Tue. Jan 14th, 2025

ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ ಸಾಮಥ್ರ್ಯ ಬೆಳೆಸಿ -ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್…..!

ಚಿತ್ರದುರ್ಗ : ಶಿಕ್ಷಕರಲ್ಲಿ ಭಾಷಾ ಕೌಶಲ್ಯಗಳನ್ನು ಸಾಮಥ್ರ್ಯ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‌ನ ಡಿ.ಎಸ್.ಐ.ಆರ್.ಟಿ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಂಗ್ಲಭಾಷಾ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಇಂಗ್ಲಿಷ್ ಭಾಷಾ ಕಲಿಕೆಯು ಅಗತ್ಯವಾಗಿದೆ. ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಭಾಷಾ ಕೌಶಲ್ಯಗಳನ್ನು ಆಲಿಸುವುದು, ಮಾತು, ಓದು ಮತ್ತು ಬರಹದಲ್ಲಿ ಸಾಮಥ್ರ್ಯ ಬೆಳೆಸಬೇಕು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಉನ್ನತ ಶಿಕ್ಷಣವನ್ನು ಪಡೆಯಲು ಸುಲಭವಾಗಿದೆ ಎಂದು ಹೇಳಿದರು.

ತರಬೇತಿಯಲ್ಲಿ ಪಡೆದ ಶಿಕ್ಷಣವನ್ನು ತರಗತಿಯಲ್ಲಿ ಅನುಷ್ಟಾನ ಮಾಡುವುದರ ಮೂಲಕ ಮಕ್ಕಳಿಗೆ ಬುನಾದಿ ಸಾಕ್ಷರತೆ ಸಾಮಥ್ರ್ಯ ಬೆಳೆಸಬೇಕು.

  ಕಾರ್ಯಕ್ರಮದಲ್ಲಿ ಡಯಟ್ ಉಪ ಪ್ರಾಚಾರ್ಯ ಅಶ್ವಥ್ ನಾರಾಯಣ, ನೋಡಲ್ ಅಧಿಕಾರಿ ಅರ್ಜುಮಂದ್ ಬಾನು, ತರಬೇತಿ ನಿರ್ದೇಶಕ ಎಲ್.ರೇವಣ್ಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ಉಪನ್ಯಾಸಕ ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಜಿ.ಜಿ.ನಾಗರಾಜು, ಸುಂದರ್ ರಾಜು, ಮಂಜುನಾಥ್, ರಂಜಿತಾ, ಸ್ಮಿತಾ, ಪ್ರಕಾಶ್, ರಾಧಾ ಮತ್ತು ಶಿಕ್ಷಕರು.

Related Post

Leave a Reply

Your email address will not be published. Required fields are marked *