ಚಿತ್ರದುರ್ಗ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025ರ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಶಿವಮೊಗ್ಗ ವಿಭಾಗದ ಉಪಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಉದ್ಘಾಟನೆ ನೆರವೇರಿಸಿ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಚಿತ್ರ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಿಂಗೆ, ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್, ಮೋಟಾರು ವಾಹನ ನಿರೀಕ್ಷಕ ಪ್ರಕಾಶ ಹಾಗೂ ಅಧೀಕ್ಷಕ ಸಿ.ಡಿ.ಹೇಮಂತ್ ಕುಮಾರ್ ಇದ್ದರು.