Breaking
Sat. Jan 18th, 2025

ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ…

ಜ.19 ಮತ್ತು 25ರಂದು ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಚಿತ್ರದುರ್ಗ : ಇದೇ ಜ.19 ಮತ್ತು 25ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗ್ರೂಪ್-ಬಿ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದ ಪರೀಕ್ಷಾ ಕೇಂದ್ರಗಳ ಸುತ್ತಿನ 200 ಮಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.

  ಪರೀಕ್ಷೆಯು ಚಿತ್ರದುರ್ಗ ನಗರದ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸಿ.ಆರ್.ಪಿ.ಸಿ. ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಪರೀಕ್ಷಾ ಕೇಂದ್ರಗಳ ನಿರ್ವಹಣಾ ಜೆರಾಕ್ಸ್ ಅಂಗಡಿ ಮತ್ತು ಇಂಟರ್‌ನೆಟ್ ಕೇಂದ್ರಗಳಲ್ಲಿ ಜ.19 ಮತ್ತು 25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಅವರು ಸೂಚಿಸಿದ್ದಾರೆ .

Related Post

Leave a Reply

Your email address will not be published. Required fields are marked *