Breaking
Sat. Jan 18th, 2025

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ….!

ಚಿತ್ರದುರ್ಗ  :  ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.

ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ SATS ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಅನ್ವಯವಾದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳು ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಭಾವಚಿತ್ರ ಅವಶ್ಯಕವಾಗಿರುತ್ತವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ತಾವು ದಾಖಲಾಗಲು ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕು. ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಪ್ರವೇಶ ಬಯಸುವ ಶಾಲೆಗಳ ಆದ್ಯತಾ ಕ್ರಮದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ Computerised Auto Selection ಮೂಲಕ ಸೀಟು ಹಂಚಿಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು 2025ರ ಜನವರಿ 25 ಕೊನೆಯ ದಿನವಾಗಿದೆ. ಫೆಬ್ರವರಿ 12ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಗಳ ಪ್ರಾಂಶುಪಾಲರು ಅಥವಾ ಕೆಇಎ ಸಹಾಯವಾಣಿ ಸಂಖ್ಯೆ 080-23460460 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *