ಚಿತ್ರದುರ್ಗ : ಕರ್ನಾಟಕ ಲೋಕಸೇವಾ ಅಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್-ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯಲ್ಲಿ ಶಾಂತಿಯುತವಾಗಿ ಯಾವುದೇ ಗೊಂದಲವಿಲ್ಲದೆ ಜರುಗಿತು.
ಚಿತ್ರದುರ್ಗ ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಪತ್ರಿಕೆ-1 ಸಾಮಾನ್ಯ ಪತ್ರಿಕೆಗೆ ಜಿಲ್ಲೆಯಲ್ಲಿ ಒಟ್ಟು 7783 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3160 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4623 ಅಭ್ಯರ್ಥಿಗಳು ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.