Breaking
Mon. Jan 27th, 2025

76ನೇ ಗಣರಾಜ್ಯೋತ್ಸವ ದಿನಾಚರಣೆ” :  “ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ….!

“ಜಿಲ್ಲಾಡಳಿತ ಭವನದಲ್ಲಿ‌ 76ನೇ ಗಣರಾಜ್ಯೋತ್ಸವ ದಿನಾಚರಣೆ” :  “ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರಿಂದ ಧ್ವಜಾರೋಹಣ

ಬೆಂ.ಗ್ರಾ.ಜಿಲ್ಲೆ, : “76ನೇ ಗಣರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

   ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *