ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹುತಾತ್ಮ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.