Breaking
Mon. Jan 27th, 2025

76 ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್….!

ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ರಹೀಂ ಖಾನ್

ಬಳ್ಳಾರಿ  : 76 ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಧ್ವಜ ಸ್ತಂಭದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಪಾಲಿಕೆಯ ಉಪಮೇಯರ್ ಡಿ.ಸುಕುಂ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್.ಪಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು, ಸಾರ್ವಜನಿಕರು ಹಾಗೂ ಇತರರು ಇದ್ದರು.

 

Related Post

Leave a Reply

Your email address will not be published. Required fields are marked *